
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಗ್ರಾಮ ದೇವತೆ ಶ್ರೀ ಲಕ್ಷ್ಮೀ ದೇವಿಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶಾಸಕರ ನಿದಿಯಿಂದ 6.40 ಲಕ್ಷ ರೂ,ಗಳನ್ನು ನೀಡಲು ನಿರ್ಧರಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮೊದಲ ಕಂತಿನಲ್ಲಿ 3 ಲಕ್ಷ ರೂ,ಗಳ ಚೆಕ್ಕನ್ನು ದೇವಸ್ಥಾನದ ಕಮೀಟಿಯವರಿಗೆ ಶುಕ್ರವಾರ ಸಂಜೆ ಹಸ್ತಾಂತರಿಸಿದರು.

ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕೆಲಸಗಳಿಗೆ ಒತ್ತು ನೀಡಲಾಗುತ್ತಿದೆ. ಈ ಗ್ರಾಮದ ಸುತ್ತಮುತ್ತಲಿನ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಿದ್ದು, ಇನ್ನೂ ಹತ್ತಾರು ಕೆಲಸಗಳನ್ನು ಮಾಡಿಸುವ ಆಶಾ ಭಾವನೆಯನ್ನು ಹೊಂದಿದ್ದೇನೆ. ನಿಮ್ಮ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಸದಾಕಾಲವೂ ಹೀಗೆಯೇ ಇರಲಿ ಎಂದು ಹೆಬ್ಬಾಳಕರ್ ವಿನಂತಿಸಿದರು.
