
4 ಶಾಲಾ ಕೊಠಡಿ ನಿರ್ಮಾಣಕ್ಕೂ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾವಿನಕಟ್ಟಿ ಗ್ರಾಮದ ಶ್ರೀ ರೇಣುಕಾಚಾರ್ಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ನಿಧಿಯ (MLA Fund) ವತಿಯಿಂದ 3.5 ಲಕ್ಷ ರೂ. ನೀಡಿದ್ದಾರೆ. ಇದರ ಪೈಕಿ ಮೊದಲ ಕಂತಿನಲ್ಲಿ 2 ಲಕ್ಷ ರೂ,ಗಳ ಚೆಕ್ಕನ್ನು ದೇವಸ್ಥಾನದ ಕಮೀಟಿಯವರಿಗೆ ಬುಧವಾರ ಹಸ್ತಾಂತರಿಸಲಾಯಿತು.
ಜೊತಗೆ 45 ಲಕ್ಷ ರೂ. ಲಕ್ಷ ರೂ,ಗಳ ವೆಚ್ಚದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ಹೊಸದಾಗಿ 4 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೂ ಸಹ ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಕಲ್ಲಪ್ಪ ರಾಮಚನ್ನವರ, ನೂತನವಾಗಿ ಆಯ್ಕೆಗೊಂಡಂತಹ ಗ್ರಾಮ ಪಂಚಾಯತ್ ಸದಸ್ಯರು, ನಿಲೇಶ ಚಂದಗಡ್ಕರ್, ದೇವಸ್ಥಾನದ ಕಮೀಟಿಯವರು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



