ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗಣೇಶಪುರದ ಕ್ರಾಂತಿನಗರದಲ್ಲಿ “ಕ್ರಾಂತಿನಗರ ನಾಗರೀಕರ ಕ್ಷೇಮಾಭಿವೃದ್ಧಿ ಸಂಘ” ವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಸಂಘಟನೆ ಇಲ್ಲಿಯ ನಾಗರಿಕರ, ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರ ಯೋಗಕ್ಷೇಮ ನೋಡಿಕೊಳ್ಳಬೇಕು. ಯುವಕರು ಮುಂದಾಗಿ ವಿವಿಧ ರಚನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಯುವಜನಾಂಗ ದಾರಿ ತಪ್ಪದಂತೆ ಗಮನಹರಿಸಬೇಕು ಎಂದು ಕರೆನೀಡಿದರು.
ಇಲ್ಲಿನ ನಿವಾಸಿಗಳು ರಸ್ತೆ, ಗಟಾರ ನಿರ್ಮಾಣ ಬೇಡಿಕೆಯನ್ನು ಇಟ್ಟಿದ್ದು, ಆದಷ್ಟು ಬೇಗ ಈ ಎಲ್ಲ ಕಾಮಗಾರಿಗಳನ್ನು ಮಾಡಿಸುವುದಾಗಿ ಹೆಬ್ಬಾಳಕರ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಜನಪ್ರತಿನಿಧಿಗಳು, ಅಶೋಕ ಚಂದರಗಿ, ಯುವರಾಜ ಕದಂ, ಸಂಘದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ