ಸಿಎಂ ಭೇಟಿಯಾದ ಲಕ್ಷ್ಮಿ ಹೆಬ್ಬಾಳಕರ್: ಕ್ಷೇತ್ರಕ್ಕೆ ಮತ್ತಷ್ಟು ಯೋಜನೆಗಳ ನಿರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನ ಪ್ರಭಾವಿ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.
ಡಾಲರ್ಸ್ ಕಾಲನಿಯ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಹೆಬ್ಬಾಳಕರ್ ಸುಮಾರು ಒಂದು ಗಂಟೆಗಳ ಕಾಲ ಅವರೊಂದಿಗೆ ಚರ್ಚಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಸಾಕಷ್ಚು ಅಭಿವೃದ್ಧಿ ಯೋಜನೆಗಳನ್ನು ತರುತ್ತಿರುವ ಹೆಬ್ಬಾಳಕರ್ ಮತ್ತಷ್ಟು ಯೋಜನೆಗಳ ಪ್ರಸ್ತಾವನೆಯನ್ನು ಸಿಎಂ ಮುಂದಿಟ್ಟಿದ್ದಾರೆ.
ತಾವು ಶಾಸಕಿಯಾಗುವ ಮುನ್ನ ಕ್ಷೇತ್ರಕ್ಕಾಗಿ ಹಾಕಿಕೊಂಡಿದ್ದ ಯೋಜನೆಗಳನ್ನು ಹಾಗೂ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವುದನ್ನು ಯಡಿಯೂರಪ್ಪ ಅವರಿಗೆ ವಿವರಿಸಿದ ಹೆಬ್ಬಾಳಕರ್, ಪ್ರವಾಹದಿಂದಾಗಿ ಕ್ಷೇತ್ರದಲ್ಲಿ ಯಾವರೀತಿ ಪರಿಣಾವಾಗಿದೆ ಎನ್ನುವ ಮಾಹಿತಿಯನ್ನೂ ನೀಡಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮತ್ತು ಕೆಲವು ನಿರ್ಧಿಷ್ಟ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾವನೆಗಳನ್ನು ಹೆಬ್ಬಾಳಕರ್ ಸಲ್ಲಿಸಿದರು.
ಎಲ್ಲ ಮಾಹಿತಿಗಳನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಕ್ಷೇತ್ರವನ್ನು ನಿರಂತರವಾಗಿ ಅಭಿವೃದ್ಧಿಪಡಿಸುತ್ತಿರುವ ಲಕ್ಷ್ಮಿ ಹೆಬ್ಬಾಳಕರ್ ಕುರಿತು ಶ್ಲಾಘಿಸಿದರಲ್ಲದೆ ಸರಕಾರದಿಂದ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ