
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಸರಸ್ವತಿ ನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪೂಜೆ ನೆರವೇರಿಸಿದರು.
ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಯುವರಾಜ ಕದಂ, ಪಕ್ಷದ ಕಾರ್ಯಕರ್ತರು ಮೊದಲಾದವರ ಉಪಸ್ಥಿತಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಗ್ರಾಮೀಣ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಒಂದಲ್ಲ ಒಂದು ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿರುವ ಲಕ್ಷ್ಮಿ ಹೆಬ್ಬಾಳಕರ್, ನಿರಂತರವಾಗಿ ಪೂಜೆಯ ಮೂಲಕ ಚಾಲನೆ ನೀಡುತ್ತಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳ ದುರಸ್ತಿ ಜೊತೆಗೆ, ಹೊಸ ಹೊಸ ಯೋಜನೆಗಳನ್ನೂ ಗ್ರಾಮೀಣ ಕ್ಷೇತ್ರಕ್ಕೆ ತರುತ್ತಿದ್ದಾರೆ.
ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ದಿಸೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಮುನ್ನಡೆಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ