ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಸೋಮವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಒಟ್ಟು 14 ಲಕ್ಷ ರೂ.ಗಳ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಲಸಿಕಾ ಕೇಂದ್ರಕ್ಕೆ ಭೇಟಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದಲ್ಲಿನ ಕೋವಿಡ್ ಲಸಿಕಾ ಕೇಂದ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭೇಟಿಯನ್ನು ನೀಡಿ ಅಲ್ಲಿನ ಜನರ ಆರೋಗ್ಯದ ಬಗ್ಗೆ ವಿಚಾರಿಸಿದರು.
ಕೊರೋನಾ ಸೋಂಕನ್ನು ಆದಷ್ಟು ಬೇಗ ಹೊಡೆದೊಡಿಸಲು ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ನ ಉಪಯೋಗವನ್ನು ನಾವೆಲ್ಲರೂ ಮರೆಯಬಾರದು. ಚಿಕ್ಕ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅನವಶ್ಯಕವಾಗಿ ಹೊರಗಡೆ ಬರದೇ ಕುಟುಂಬಸ್ಥರ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಜನರಲ್ಲಿ ಹೆಬ್ಬಾಳಕರ್ ವಿನಂತಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಸ್ಥಳೀಯ ಮುಖಂಡರು, ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ