Karnataka NewsLatest

ಗೋಕಾಕದಲ್ಲಿ ಸ್ಪರ್ಧೆಗೆ ಸಿದ್ದ ಎಂದ ಲಕ್ಷ್ಮಿ ಹೆಬ್ಬಾಳಕರ್, ಮೋಸ್ಟ್ ವೆಲ್ ಕಂ ಎಂದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಹಸ್ತಕ್ಷೇಪ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಗಂಭೀರ ಎಚ್ಚರಿಕೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ನಾನೂ ಗೋಕಾಕ ಕ್ಷೇತ್ರದತ್ತ ಹೋಗಬೇಕಾಗುತ್ತದೆ. ಪಕ್ಷ ಬಯಸಿದರೆ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲೂ ಸಿದ್ಧ ಎಂದು ಸವಾಲೆಸೆದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಿ ಹೆಬ್ಬಾಳಕರ್ ಗೆ ಮೋಸ್ಟ್ ವೆಲ್ ಕಂ ಎಂದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಇಬ್ಬರೂ ಪರಸ್ಪರರಿಗೆ ಟಾಂಗ್ ನೀಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ. ನಾನು ಜನರ ಸೇವೆ, ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದೇನೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ನಾನೂ ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

Home add -Advt

ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ನಾನು ಜಿಲ್ಲಾ ಉಸ್ತುವಾರಿ ಸಚಿವ. ಇಡೀ ಜಿಲ್ಲೆಯಲ್ಲಿ ಕೆಲಸ ಮಾಡಲು ನನಗೆ ಅಧಿಕಾರವಿದೆ. ಎಲ್ಲಿ ಬಿಜೆಪಿ ಶಾಸಕರಿಲ್ಲವೋ ಅಲ್ಲಿ ಬಿಜೆಪಿ ಗೆಲ್ಲಿಸಲು ಕೆಲಸ ಮಾಡುವ ಹಕ್ಕು ನನಗಿದೆ. ಹಸ್ತಕ್ಷೇಪದ ಪ್ರಶ್ನೆ ಬರುವುದಿಲ್ಲ. ಲಕ್ಷ್ಮಿ ಹೆಬ್ಬಾಳಕರ್ ಗೋಕಾಕದಿಂದ ಸ್ಪರ್ಧಿಸುವುದಾದರೆ ಮೋಸ್ಟ್ ವೆಲ್ ಕಂ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು ಎಂದು ಹೇಳಿದರು.

Related Articles

Back to top button