Kannada NewsKarnataka NewsLatest

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಡಿನ ಕೆಲವೆಡೆಗಳಲ್ಲಿ ಡಿಸೆಂಬರ್ 2ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಶಿಣ ಕನ್ನಡ, ಉಡುಪಿ, ಬೀದರ್, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ದಾವಣಗೆರೆ, ಮಂಡ್ಯ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ನಿನ್ನೆ ಮಳೆಯಾಗಿದೆ. ಇಂದು ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button