ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಅಪಘಾನಿಸ್ತಾನ್ ದಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಕ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಂಜೆ 4.15ಕ್ಕೆ ಟ್ವೀಟ್ ಮಾಡಿದ್ದರು.
ಕನ್ನಡಿಗರ ರಕ್ಷಣೆಗೆ ನೋಡಲ್ ಅಧಿಕಾರಿ ನೇಮಿಸಿ: ಲಕ್ಷ್ಮಿ ಹೆಬ್ಬಾಳಕರ್ ಆಗ್ರಹ
ಇದಾಗಿ 3 ಗಂಟೆಯಲ್ಲೇ ಸಂಜೆ 7 ಗಂಟೆಗೆ ಸರಕಾರ ನೋಡಲ್ ಅಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ. 7.13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ ಕುಮಾರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಧನ್ಯವಾದ ಸಲ್ಲಿಸಿದ್ದಾರೆ.
ಅಫ್ಗಾನಿಸ್ತಾನದಲ್ಲಿ ಸಂಘರ್ಷಭರಿತ ಪರಿಸ್ಥಿತಿ ಇದ್ದು, ಅಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಸಲುವಾಗಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಲು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಶ್ರೀ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.@CMofKarnataka pic.twitter.com/8kWOIkjE9x
— Basavaraj S Bommai (@BSBommai) August 18, 2021
ಕರ್ನಾಟಕ ರಾಜ್ಯದ ಕನ್ನಡಿಗರು ಅಪಘಾನಿಸ್ಥಾನ ದೇಶದಲ್ಲಿ ವಿವಿಧ ವೃತ್ತಿಯಲ್ಲಿ ತೊಡಗಿದ್ದು, ಆ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳು ಜರುಗುತ್ತಿರುವುದರಿಂದ, ಆ ದೇಶದಲ್ಲಿ ನೆಲೆಸಿರುವ ಕನ್ನಡಿಗರ ಸೂಕ್ತ ರಕ್ಷಣೆ ಮತ್ತು ಸುರಕ್ಷಿತವಾಗಿ ಕರೆ ತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಈ ಮೂಲಕ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ.
— Laxmi Hebbalkar (@laxmi_hebbalkar) August 18, 2021
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ