Kannada NewsLatest

ವಿನಯ ಕುಲಕರ್ಣಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳಕರ್

Home add -Advt

 

ಪ್ರಗತಿವಾಹಿನಿ ಸುದ್ದಿ, ಧಾರವಾಡ – ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಧಾರವಾಡದ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿ ಜೈಲು ಸೇರಿದ್ದಾರೆ. ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮುಖಂಡರನ್ನು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ವಿನಾಕಾರಣ ಕಿರುಕುಳ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.

ವಿನಯ ಕುಲಕರ್ಣಿ ಜೊತೆಗೆ ಮತ್ತು ಅವರ ಕುಟುಂಬದ ಜೊತೆ ಸಂಪೂರ್ಣ ಕಾಂಗ್ರೆಸ್ ನಿಲ್ಲಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.

ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳದಂತೆ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಹೆಬ್ಬಾಳಕರ್ ಕುಟುಂಬ ಸದಸ್ಯರಿಗೆ ತಿಳಿಸಿದರು.

Related Articles

Back to top button