*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಭೀಕರ ಅಪಘಾತ: ಸಚಿವರು ಪ್ರಾಣಾಪಾಯದಿಂದ ಪಾರು*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಭೀಕರ ಅಪಘಾತಕ್ಕೀಡಾಗಿದೆ.
ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಿತ್ತೂರು ಸಮೀಪ ಅಂಬರಗಟ್ಟಿ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಚಿವೆ ಲಕ್ಷ್ನೀ ಹೆಬ್ಬಾಳಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಸಚಿವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿಎಲ್ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದ ಲಕ್ಷ್ಮೀ ಹೆಬ್ಬಾಳಕರ್ ಕಾರು ಇಂದು ಬೆಳಗಿನ ಜಾವ 6 ಗಂಟೆಗೆ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಅಪಘಾತವಾಗಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಕೂಡಾ ಗಾಯವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ