Belagavi NewsBelgaum NewsKannada NewsKarnataka NewsLatest
*ಉದ್ಯಾನವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.