*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತಕ್ಕೀಡಾಗಿದ್ದು, ಸಚಿವರಿಗೆ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಗಾಯಗಳಾಗಿವೆ. ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪರಾಗಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತವಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತದ ಬಗ್ಗೆ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಗಾಯವಾಗಿದ್ದು, ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗಾಗಾಲೆ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಯಿಂದ ಮನಗೆ ತೆರಳಿದ್ದಾರೆ. ಕಾರ್ ನಲ್ಲಿ ಇದ್ದ ಗನ್ ಮ್ಯಾನ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರು ಕೂಡಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡಾ ಮುಂದಿನ ಎರಡು ದಿನದಲ್ಲಿ ಡಿಸ್ಚಾರ್ಜ ಆಗಿ ಮನೆಗೆ ಹೋಗುತ್ತಾರೆ ಎಂದು ವೈದ್ಯ ಡಾ. ರವಿ ಪಾಟೀಲ್ ಅವರು ತಿಳಿಸಿದ್ದಾರೆ. ಇನ್ನೂ ಅಪಘಾತತ ಸುದ್ದಿ ತಿಳಿಯುತ್ತಿದಂತೆ ಆಸ್ಪತ್ರೆಗೆ ಕುಟುಂಬಸ್ಥರು ದೌಡಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ