Belagavi NewsBelgaum NewsKannada NewsKarnataka News

ಶಿವಕಾಂತ್ ಸಿದ್ನಾಳ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉದ್ಯಮಿ ಶಿವಕಾಂತ್ ಸಿದ್ನಾಳ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ನಾಳ ಅವರ ಕುಟುಂಬದೊಂದಿಗೆ ಮೊದಲಿನಿಂದಲೂ ನಮಗೆ ಆತ್ಮೀಯ ಒಡನಾಟವಿದೆ. ಶಿವಕಾಂತ ಸಿದ್ನಾಳ ಅವರು ಆದಿತ್ಯ ಮಿಲ್ಕ್ ಸಂಸ್ಥೆ ಸ್ಥಾಪಿಸಿ ಅದರಲ್ಲಿ ಯಶಸ್ವಿಯಾಗುವ ಮೂಲಕ ದೊಡ್ಡ ಸಾಧನೆ ಮಾಡಿದ್ದರು. ಇನ್ನೂ ಬಹಳಷ್ಟು ಸಾಧನೆ ಮಾಡುವ ಕನಸು ಹೊತ್ತಿದ್ದ ಅವರು ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದು ದುಃಖವನ್ನುಂಟು ಮಾಡಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಕಂಬನಿ ಮಿಡಿದಿದ್ದಾರೆ.

ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. 

Home add -Advt

ಚನ್ನರಾಜ ಹಟ್ಟಿಹೊಳಿ ಅವರು, ಶಿವಕಾಂತ ಸಿದ್ನಾಳ ನಿಧನದ ಸುದ್ದಿ ತಿಳಿದ ತಕ್ಷಣ ಅವರ ಮನೆಗೆ ತೆರಳಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button