Kannada News

​ಖರ್ಗೆಗೆ ಅಭಿನಂದನೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ​

ಪ್ರಗತಿವಾಹಿನಿ ಸುದ್ದಿ, ​ನವದೆಹಲಿ: ​ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧಿನಾಯಕಿಯಾದ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ  ಮಲ್ಲಿಕಾರ್ಜುನ​ ಖರ್ಗೆ​ ಅವರ ನೇತೃತ್ವದಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಗುರುವಾರ ನವದೆಹಲಿಯ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಭಿನಂದಿಸಿದರು.
​ಇದೇ ವೇಳೆ, ಚನ್ನರಾಜ ಹಟ್ಟಿಹೊಳಿ ಅವರಿಗೆ ಮಾರ್ಗದರ್ಶನ ನೀಡಿದ ಖರ್ಗೆ, ಚನ್ನರಾಜ ಅವರ ರಾಜಕೀಯ ಜೀವನಕ್ಕೆ ಶುಭ ಹಾರೈಸಿದರು. ​
https://pragati.taskdun.com/himachala-pradeshagujarathelection-result/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button