ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಜಯಪುರದ ಷಣ್ಮುಖಾರೂಢ ಮಠ ವಿಜಯಪುರ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಅಭಿನವ ಶಿವಪುತ್ರ ಮಹಾಸ್ವಾಮಿಗಳ ನಿಧನಕ್ಕೆ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸ್ವಾಮಿಗಳು ಲಿಂಗೈಕ್ಯರಾಗಿರುವ ವಿಷಯ ತಿಳಿದು ದುಃಖವಾಗಿದೆ. ಅವರೊಬ್ಬ ಆದರ್ಶ ಮಠಾಧೀಶರಾಗಿದ್ದರು. ಉತ್ತಮ ಮಾರ್ಗದರ್ಶಕರಾಗಿದ್ದರು. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಿ, ಮಾರ್ಗದರ್ಶಕರಾಗಿ ನಿಲ್ಲುತ್ತಿದ್ದರು. ಅವರ ಅಗಲಿಕೆಯಿಂದ ತುಂಬಲಾರದ ನಷ್ಠ ಉಂಟಾಗಿದೆ ಎಂದು ತಿಳಿಸಿದ್ದಾರೆ.