Belagavi NewsBelgaum NewsKannada NewsKarnataka NewsPolitics

*ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ, ಮಾಜಿ ಸಚಿವರೂ ಆಗಿರುವ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ನಮ್ಮ ಸಮಾಜದ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿ ನಮಗೆಲ್ಲ ಮಾರ್ಗದರ್ಶನ ನೀಡುತ್ತಿದ್ದರು. ಪಕ್ಷ ಮತ್ತು ಸಮಾಜ ಸಂಘಟನೆಯಲ್ಲಿ ಮುಂದಾಳತ್ವ ವಹಿಸಿದ್ದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ದೊಡ್ಡ ಮಟ್ಟದ ಕೊಡುಗೆ ನೀಡಿದ್ದರು. ರಾಜ್ಯಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಮತ್ತು ವೀರಶೈವ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಅನನ್ಯವಾದುದು. ಅವರ ನಿಧನದಿಂದ ನಾವು ಒಳ್ಳೆಯ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. 

ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆಗಿರುವ ದುುಃಖದಲ್ಲಿ ನಾನೂ ಭಾಗಿಯಾಗುತ್ತೇನೆ. ಅವರ ಬಂಧುಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ  ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

Home add -Advt

Related Articles

Back to top button