Karnataka NewsPolitics

*ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವರು, 7 ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 5 ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಮತ್ತು 7 ಮಂದಿಗೆ ಶ್ರವಣದೋಷ ಇರುವವರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬಡೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಇಲಾಖೆಯ ನಿರ್ದೇಶಕ ರಾಘವೇಂದ್ರ, ಜಂಟಿ ಕಾರ್ಯದರ್ಶಿ ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ , ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕ ರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button