
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ - ವಿಷಪೂರಿತ ಆಹಾರ ಸೇವಿಸಿ ಕುರಿಗಳು ಸಾವಿಗೀಡಾದ ಘಟನೆಗೆ ತಕ್ಷಣ ಸ್ಪಂದಿಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು.

ಸುದ್ದಿ ತಿಳಿದ ತಕ್ಷಣ ಅವರ ಮನೆಗಳಿಗೆ ತೆರಳಿದ ಲಕ್ಷ್ಮಿ ಹೆಬ್ಬಾಳಕರ್, ಕುಟುಂಬಗಳಿಗೆ ಸಾಂತ್ವನವನ್ನು ಹೇಳಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಧನ ಸಹಾಯ ಮಾಡಿ ಧೈರ್ಯವನ್ನು ತುಂಬಿದರು.

ಈ ಸಂದರ್ಭದಲ್ಲಿ ಹಿರಿಯರಾದ ಬಾಗಣ್ಣ ನರೋಟಿ, ಯುವರಾಜ ಕದಂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ