ಹಿರೇಬಾಗೇವಾಡಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಲಕ್ಷ್ಮೀ ಹೆಬ್ಬಾಳಕರ್: ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ಸಚಿವೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಹಿರೇಬಾಗೇವಾಡಿಗೆ ತೆರಳಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.



ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಿರೇಬಾಗೇವಾಡಿ ಗ್ರಾಮಕ್ಕೆ ತೆರಳಿದ ಅವರು ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಿದರು. ಶ್ರೀ ಪಡಿ ಬಸವೇಶ್ವರ ದೇವಸ್ಥಾನಕ್ಕೆ ಹಾಗೂ ಶಿವಾಲಯಕ್ಕೆ ಸಹ ತೆರಳಿ ದರ್ಶನ ಪಡೆದರು. ನಂತರ ಹಿರೇಬಾಗೇವಾಡಿಯ ಗೌಸಿಯಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿ, ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ದರ್ಗಾ ಅಜ್ಜನವರು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸತ್ಕರಿಸಿದರು.

ಇದಾದ ನಂತರ ತಪೋಕ್ಷೇತ್ರ ಅರಳೀಕಟ್ಟಿ ಗ್ರಾಮದ ತೋಂಟದಾರ್ಯ ವಿರಕ್ತಮಠಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಶಿವಮೂರ್ತಿ ಅಜ್ಜನವರ ಆಶೀರ್ವಾದ ಪಡೆದರು.
ನಂತರ ಬಡೆಕೊಳ್ಳ ಮಠಕ್ಕೂ ಭೇಟಿ ನೀಡಿ ಆಶಿರ್ವಾದ ಪಡೆದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ