Anvekar add 3.jpg
Beereshwara Add 21
KLE 1099

ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar initiated the drinking water project

Balachandra Jarkihli Add
ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋನೆವಾಡಿ ಗ್ರಾಮಕ್ಕೆ ಕುಡಿಯುವ ನೀರಿನ ಸರಬರಾಜು ಸಲುವಾಗಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 60 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
​ ಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಪರದಾಟವಿತ್ತು. ಆದರೆ ಈಗ ಜಲಜೀವನ್ ಮಿಷನ್ ಯೋಜನೆಯಿಂದಾಗಿ ಹಲವು ಹಳ್ಳಿಗಳ ಜನರಿಗೆ ನೆಮ್ಮದಿ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಕ್ಷೇತ್ರವನ್ನು ಕುಡಿಯುವ ನೀರಿನ ಸಮಸ್ಯೆಯಿಂದ ಮುಕ್ತ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. 
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ರಾಜು ಪಾಟೀಲ, ಅರುಣ ಪಾಟೀಲ, ಅನಿಲ, ವಸಂತ, ಲಕ್ಷ್ಮಣ ಕಿತ್ತವಾಡ್ಕರ್, ಗೌಡು ಪಾಟೀಲ, ಗೋಪಾಲ ಪಾಟೀಲ, ಸತೀಶ ಭಾತ್ಕಂಡೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
https://pragativahini.com/an-incident-of-firing-has-been-reported-in-savasuddi-village-of-harugeri-limits/
Home add Bottom