Latest

ಮದುವೆಗೆ ಕುಟುಂಬಸ್ಥರ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮದುವೆಗೆ ಕುಟುಂಬಸ್ಥರು ವಿರೋಧಿಸಿದ್ದರಿಂದ ಪ್ರೇಮಿಗಳಿಬ್ಬರು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ದುಗ್ಗಹಳ್ಳಿಯ ಯುವತಿ ಹಾಗೂ ಕುರಿಹುಂಡಿಯ ಗ್ರಾಮದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಜೋಡಿ. ಇಬ್ಬರು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.

Home add -Advt

ಇದರಿಂದ ನೊಂದ ಯುವಕ ಇಂದು ಯಾರೂ ಇಲ್ಲದ ವೇಳೆ ಯುವತಿಯ ಮನೆಗೆ ಹೋಗಿದ್ದಾನೆ. ಮದುವೆಗೆ ಪೋಷಕರ ವಿರೋಧದ ಹಿನ್ನೆಲೆ ಇಬ್ಬರು ಕತ್ತು ಕುಯ್ದುಕೊಂಡು ಮನೆಯ ಹೊರಗೆ ಬಂದು ಕುಳಿತಿದ್ದಾರೆ.

ತಕ್ಷಣ ಸ್ಥಳೀಯರು ಪೊಲೀಸರು ಮತ್ತು ಅಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related Articles

Back to top button