Belagavi NewsBelgaum NewsKannada NewsKarnataka NewsNationalPolitics

*ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ಅರ್ಜಿಗಳ ಪರಿಶೀಲನೆ; ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿದರು.

Home add -Advt

ನಗರ ಹಾಗೂ ಗ್ರಾಮೀಣ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಹೆಬ್ಬಾಳಕರ್ ಅವರ ಗಮನಕ್ಕೆ ತಂದರು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಬರುವ ಸಮಸ್ಯೆಗಳು, ಸರ್ಕಾರಿ ಸೌಲಭ್ಯಗಳ ಕುರಿತು ಮನವಿಗಳು ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು.

ಪ್ರತಿಯೊಬ್ಬರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಹೆಬ್ಬಾಳಕರ್, ಅರ್ಜಿಗಳಲ್ಲಿರುವ ವಿಷಯಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಾರದು. ಅರ್ಹ ಪ್ರಕರಣಗಳಲ್ಲಿ ನಿಯಮಾನುಸಾರ ತ್ವರಿತವಾಗಿ ಸ್ಪಂದಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು, ಸಮಸ್ಯೆಗಳಿಗೆ ಶೀಘ್ರವೇ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕ ಜೀವನದಲ್ಲಿರುವವರ ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಾರ್ವಜನಿಕರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button