Belagavi NewsBelgaum NewsKarnataka NewsLatestPolitics
*ಸಿದ್ದಲಿಂಗ ದಳವಾಯಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕುರುಬ ಸಮಾಜದ ಹಿರಿಯ ಮುಖಂಡರೂ, ಗೋಕಾಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರೂ, ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರೂ ಆಗಿದ್ದ ಸಿದ್ದಲಿಂಗ ದಳವಾಯಿ ವಿಧಿವಶರಾಗಿದ್ದಾರೆ.

ಇಂದು ಸಿದ್ದಲಿಂಗ ದಳವಾಯಿ ನಿಧನರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದಳವಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.