ಪ್ರಗತಿವಾಹಿನಿ ಸುದ್ದಿ, *ತುಮಕೂರು* : ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಕುಟುಂಬದ ಸದಸ್ಯರೊಂದಿಗೆ ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ತೆರಳಿ, ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿದರು.
ಜೊತೆಗೆ, ಶ್ರೀ ಶ್ರೀ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.
ನಾಡಿನ ಒಳಿತಿಗಾಗಿ ಮತ್ತು ರಾಜ್ಯದ ಕಾಂಗ್ರೆಸ್ ಸರಕಾರದ ಉತ್ತಮ ಭವಿಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಅವರು ಈ ವೇಳೆ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ