ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಲಗಾ ಗ್ರಾಮದ ಬಾಲ ಆಚಾರ್ಯ ಶ್ರೀ 108 ಸಿದ್ದಸೇನಾ ಮುನಿ ಮಹಾರಾಜರನ್ನು ಮಂಗಳವಾರ ಭೇಟಿ ಮಾಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಆಶೀರ್ವಾದ ಪಡೆದುಕೊಂಡರು.
ಆರು ತಿಂಗಳ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಿದ್ದಸೇನಾ ಮುನಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಮಹಾರಾಜರು ಆಶೀರ್ವದಿಸಿ, ನೀವು ಈ ಕ್ಷೇತ್ರದ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿ, ರಾಜ್ಯ ಸರ್ಕಾರದ ಸಂಪುಟದಲ್ಲಿ ಸಚಿವೆಯಾಗಿ ಹೊರಹೊಮ್ಮುತ್ತೀರಿ ಎಂದು ಆಶೀರ್ವಾದ ಮಾಡಿದ್ದರು ಎಂದು ನೆನಪಿಸಿಕೊಂಡ ಲಕ್ಷ್ಮೀ ಹೆಬ್ಬಾಳಕರ್, ಮಹಾರಾಜರ ಆಶೀರ್ವಾದದಿಂದ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು.
ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ