
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಗರಿ ಗೆದರಿದ್ದು, ಇಂದೇ ನೂತನ ಸಚಿವರ ಪಟ್ಟಿ ಫೈನಲ್ ಅಗುವ ಸಾಧ್ಯತೆ ಇದೆ.
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ 20 ಶಾಸಕರಿಗೆ ಸಚಿವ ಸ್ಥಾನ ಅಂತಿಮವಾಗಿದೆ. ಶನಿವಾರ (ಮೇ 27) ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ನಡೆಯಲಿದೆ.
ಶನಿವಾರ ಪ್ರಮಾಣ ವಚನ ಸಮಾರಂಭಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್, ಬಸವರಾಜ್ ರಾಯರೆಡ್ಡಿ, ಶರಣಬಸಪ್ಪ ದರ್ಶನಾಪೂರ, ಡಾ.ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಕೆ.ವೆಂಕಟೇಶ್, ಎಸ್.ಎಸ್.ಮಲ್ಲಿಕಾರ್ಜುನ, ರಹಿಂ ಖಾನ್, ಡಾ.ಅಜಯ್ ಸಿಂಗ್, ಸಿ.ಪುಟ್ಟರಂಗಶೆಟ್ಟಿ, ಹೆಚ್.ಕೆ.ಪಾಟೀಲ್, ಎಂ.ಪಿ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್, ಡಿ.ಸುಧಾಕರ್, ಬಿ.ನಾಗೇಂದ್ರ ಅಥವಾ ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಮಂಕಾಳು ವೈದ್ಯ, ಬಿ.ಕೆ.ಹರಿಪ್ರಸಾದ್, ಡಾ.ಶರಣಪ್ರಕಾಶ್ ಪಾಟೀಲ್ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ