Belagavi NewsBelgaum NewsEducationPolitics

*ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ  ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು.

ಇಂದು ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹುನುಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 ಅಂಗನವಾಡಿಗಳ ಪೈಕಿ 217 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿದ್ದು, 41 ಅಂಗನವಾಡಿ ಕೇಂದ್ರಗಳು ಸರ್ಕಾರಿ ಕಟ್ಟಡ/ಪರ್ಯಾಯ ವ್ಯವಸ್ಥೆಯಾಗಿ ಇತರೆ ಕಟ್ಟಡದಲ್ಲಿ ನಡೆಯುತ್ತಿವೆ . ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 100 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಕೇಳಿದ  ಪ್ರಶ್ನೆಗೆ  ಒಟ್ಟಾರೆ  3500 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗದ ಕಡೆಗಳಲ್ಲಿ, ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಕಟ್ಟಡಗಳನ್ನು ಬೇರೆ ಕಟ್ಟಡಗಳನ್ನು ಹಸ್ತಾಂತರ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮಕ್ಕಾಗಿ ಈಗಾಗಲೇ ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಸಚಿವೆ ತಿಳಿಸಿದರು.

ಮಂಡ್ಯ ತಾಲ್ಲೂಕಿಗೆ 14 ಅಂಗನವಾಡಿ ಕಟ್ಟಡಗಳಿಗೆ ಮಂಜೂರಾತಿ:

Home add -Advt

  ಮಂಡ್ಯ ತಾಲ್ಲೂಕಿಗೆ 2023-24 ರಿಂದ 2025-26ರವರೆಗೆ ಒಟ್ಟು 14 ಅಂಗನವಾಡಿ ಕಟ್ಟಡಗಳಿಗೆ ಮಂಜೂರಾತಿ ನೀಡಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.  

ಇಂದು ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರಗೌಡ (ಗಣಿಗ)  ಇವರು ಮಂಡ್ಯ ತಾಲ್ಲೂಕಿನಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ  ಮಂಡ್ಯ ತಾಲ್ಲೂಕಿನಲ್ಲಿ ಪ್ರಸ್ತುತ 28 ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಲಭ್ಯವಿರುತ್ತದೆ. ಅನುದಾನದ ಲಭ್ಯತೆಯನುಸಾರ ಹಂತ ಹಂತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಸಚಿವೆ ಉತ್ತರಿಸಿದರು.

Related Articles

Back to top button