Kannada NewsKarnataka NewsLatestPolitics
*ಅರಿಶಿಣ- ಕುಂಕುಮ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಾಲಗಾರ ಗಲ್ಲಿಯಲ್ಲಿ ಶ್ರೀ ಕಾಳಿಕಾ ದೈವಜ್ಞ ಮಹಿಳಾ ಮಂಡಳ ವತಿಯಿಂದ ಆಯೋಜಿಸಲಾಗಿದ್ದ ಅರಿಶಿನ ಕುಂಕುಮ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸಂಸ್ಕೃತಿಯಲ್ಲಿ ಅರಿಶಿನ – ಕುಂಕುಮಕ್ಕೆ ಬಹಳಷ್ಟು ಮಹತ್ವವಿದೆ. ಅದು ಸೌಭಾಗ್ಯದ ಸಂಕೇತ. ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದೇ ಸಂತಸ ಎಂದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದ ಮಂಡಳಿಯ ಎಲ್ಲಾ ಪದಾಧಿಕಾರಿಗಳಿಗೆ ಅವರು ಅಭಿನಂದನೆ ಸಲ್ಲಿಸಿದರು.
ಸಮಾರಂಭದಲ್ಲಿ ಕಾಳಿಕಾ ಮಹಿಳಾ ಮಂಡಳದ ಅಧ್ಯಕ್ಷರಾದ ಶುಭಾಂಗಿ ಕಾರೆಕರ್, ಉಪಾಧ್ಯಕ್ಷರಾದ ಶುಭಾ ಕಾರೆಕರ್, ಕಾರ್ಯದರ್ಶಿಗಳಾದ ನೀತಾ ಶಿರೋಡ್ಕರ್ ಮುಂತಾದವರು ಉಪಸ್ಥಿತರಿದ್ದರು.




