Politics

*ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ*

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ

ಪ್ರಗತಿವಾಹಿನಿ ಸುದ್ದಿ: ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ ಯಶಸ್ವಿ ಕಾರ್ಯಕ್ರಮಗಳಾಗಿದ್ದು, ಹಾಗಾಗಿ ಸರ್ಕಾರ ಮಕ್ಕಳಿಗಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕೆಂದು ಸೂಚಿಸಿದರು.

ಇದೇ ವೇಳೆ ಬಾಲ ಭವನ ಅಧ್ಯಕ್ಞ ಬಿ.ಆರ್.‌ ನಾಯ್ಡು ಮಾತನಾಡಿ, ಬಾಲಭವನದ ಕಾರ್ಯಕ್ರಮಗಳು ಕೊರೊನಾ ಕಾಲಾವಧಿಯಿಂದ ಸ್ಥಗಿತಗೊಂಡಿದ್ದವು. ಬಾಲಭವನ ಬೆಳೆವಣಿಗೆಗೆ ಹಾಗೂ ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

Home add -Advt

Related Articles

Back to top button