Belagavi NewsBelgaum NewsHealthKannada NewsKarnataka News

*ಕೆಎಲ್‌ ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಅತ್ಯಾಧುನಿಕ ಫರ್ಟಿಲಿಟಿ ಸೆಂಟರ್ ಉದ್ಘಾಟಿಸಲಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೆಎಲ್‌ ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಅತ್ಯಾಧುನಿಕ ಫರ್ಟಿಲಿಟಿ ಸೆಂಟರ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಲಿದ್ದಾರೆ.

ಜುಲೈ 25, 2025 ರಂದು ಬೆಳಗ್ಗೆ 10 .30ಕ್ಕೆ ಬೆಳಗಾವಿಯ ಕೆಎಲ್‌ ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಫರ್ಟಿಲಿಟಿ ಸೆಂಟರ್ ನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ ಪ್ರಭಾಕರ ಕೋರೆ ವಹಿಸಲಿದ್ದಾರೆ. ಕಾಹೆರನ ಉಪಕುಲಪತಿ ಡಾ. ನಿತಿನ ಗಂಗಾನೆ ಜೆಎನ್ಎಂ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ ಅವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ.ದಯಾನಂದ ಅವರು ಉಪಸ್ಥಿತರಿರಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button