Belagavi NewsBelgaum NewsKarnataka News

*10 ಕೋಟಿ ರೂ. ವೆಚ್ಚದಲ್ಲಿ ವೈಭವನಗರ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.

Home add -Advt


ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಸಚಿವರು ಚಾಲನೆ ನೀಡಿದರು. ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಸ್ಥಳೀಯರ ಸಲಹೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ್, ಹೆಸ್ಕಾಂ ಅಧಿಕಾರಿಗಳಾದ ಲಮಾಣಿ, ಅಶ್ವಿನ್ ಶಿಂಧೆ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ವೈಭವ ನಗರದ ನಿವಾಸಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button