Kannada NewsKarnataka NewsLatestPolitics

*ಚಾಮುಂಡಿ ತಾಯಿಗೆ ಹರಕೆ ತೀರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಚಾಮುಂಡೇಶ್ವರಿ ಬಳಿ ಹರಕೆ ಹೊತ್ತಿದ್ದ ಸಚಿವರು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಪಕ್ಷ‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು‌‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ಈಗ ದೇವಿಯನ್ನ ಬೇಡಿದ್ದೇನೆ ಎಂದು ತಿಳಿಸಿದರು.

Home add -Advt

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ ಎಂದು ಇದೇ ವೇಳೆ ತಿಳಿಸಿದರು..ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅವರಿಗೆ ಆ್ಯಪ್ ತೋರಿಸುತ್ತೇವೆ.ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡುತ್ತೇವೆ.

ಆಗಸ್ಟ್ 17 ರ ನಂತರದಿಂದ ಫಲನಾಭವಿಗಳ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು‌‌‌ ಸಚಿವರು ಸ್ಪಷ್ಟಪಡಿಸಿದರು.ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದರು.

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button