Belagavi NewsBelgaum NewsKarnataka NewsLatestPolitics

*ಹಿರಿಯ ಕಾಂಗ್ರೆಸ್ಸಿಗ ಪರುತಗೌಡ ಪಾಟೀಲ ನಿಧನ: ಅಂತಿಮ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ರಾಮದುರ್ಗ: ರಾಮದುರ್ಗ ತಾಲೂಕಿನ ಸಿದ್ನಾಳ್ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಪರುತಗೌಡ ಪಾಟೀಲ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ದೇಶಕರೂ ಆಗಿದ್ದ ಪರುತ ಗೌಡರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಅವರು ಸಲ್ಲಿಸಿದ ಸೇವೆ ಅನನ್ಯವಾದುದು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ, ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button