*ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ನಗದು ಬಹುಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಕಹೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದರು.
ಮೊಬೈಲ್ ನಿಂದ ದೂರ ಇರಿ
ಮಕ್ಕಳ ಪಾಲಿಗೆ ಮೊಬೈಲ್ ಎಂಬುದು ಸಾಮಾಜಿಕ ಪೀಡುಗಾಗಿದೆ. ಅದು ಕೇವಲ ಶಿಕ್ಷಕರ ಹೊಣೆಯಲ್ಲ. ಮನೆಯಲ್ಲಿ ಪಾಲಕರು ಮಕ್ಕಳು ಮೊಬೈಲ್ ಬಳಸದಂತೆ ನಿಗಾವಹಿಸಬೇಕು. ಮೊಬೈಲ್ ನಿಂದ ಮಕ್ಕಳು ದೂರ ಇದ್ದರಷ್ಟೂ ಎತ್ತರಕ್ಕೆ ಬೆಳೆಯುತ್ತಾರೆ ಎಂದರು.
ಅಪೌಷ್ಟಿಕತೆ ಹೋಗಲಾಡಿಸಲು ಹೋರಾಟ
ಕರ್ನಾಟಕದ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಹೋರಾಟವನ್ನೇ ಮಾಡುತ್ತಿದೆ. 1999ರಲ್ಲಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಯೋಜನೆಯನ್ನು ಜಾರಿಗೆ ತಂದರು. ಬಳಿಕ 2013 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಶಾಲಾ ಮಕ್ಕಳಿಗೆ ಮೊಟ್ಟೆ ಹಾಗೂ ಹಾಲು ನೀಡಲಾಗುತ್ತಿದೆ ಎಂದರು.
ಇದಕ್ಕೂ ಮೊದಲು ಇಂದಿರಾ ಗಾಂಧಿಯವರು 1975 ರಲ್ಲಿ ಬಡ ಮಕ್ಕಳಿಗೂ ಅಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ ಸಿಗುವ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದರು. ಕರ್ನಾಟಕದಲ್ಲಿ ಇಂದು 35 ಲಕ್ಷ ಮಕ್ಕಳು ಅಂಗನವಾಡಿ ಯಲ್ಲಿ ಕಲಿಯುತ್ತಿದ್ದಾರೆ ಎಂದು ಸಚಿವರು ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದರು.

ನಿಶ್ಚಿತಾರ್ಥ ಮಾಡಿದರೂ ಕ್ರಮ
ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು ಎಂದ ಸಚಿವರು, ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗಾಗಿಯೇ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆಗೆ ಬದ್ಧ
ಮಕ್ಕಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಚುನಾವಣೆ ಕೆಲಸಗಳಿಂದ ಮುಕ್ತಿಕೊಡಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಿದ್ದಾರೆ. ರಾಜ್ಯಾದ್ಯಂತ 70 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, 50,000 ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ನಾನು ಸಚಿವೆಯಾದ ಬಳಿಕ ಕಳೆದ ಎರಡೂವರೆ ವರ್ಷಗಳಲ್ಲಿ 200 ಕೋಟಿ ರೂಪಾಯಿಗಳನ್ನು ಅಂಗನವಾಡಿ ಕಟ್ಟಡಗಳಿಗೆ ಮೀಸಲಿಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.