Politics

*ಕಾಂಗ್ರೆಸ್ ಸ್ಥಿರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಕರೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಾಂಗ್ರೆಸ್ ಸ್ಥಿರ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸಲು ಮುಂದಾಗಿದ್ದು, ಇದರ ವಿರುದ್ಧ ಪಕ್ಷದ ಕಾರ್ಯಕರ್ತರು ಮತ್ತೊಮ್ಮೆ ಪುಟಿದೆದ್ದು ಮುಂಬರುವ ಚುನಾವಣೆಗಳಲ್ಲಿ ವಿರೋದ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉ ದ್ದೇಶಿಸಿ ಮಾತನಾಡಿದ ಸಚಿವರು, ಶಿಸ್ತಿನ ಪಕ್ಷ ಕಾಂಗ್ರೆಸ್‌ಗೆ ಎಷ್ಟೋ ಮಂದಿ ಜೀವ ತೇದು ತ್ಯಾಗ ಮಾಡಿದ್ದಾರೆ. ಬಲಿದಾನಗಳ ಇತಿಹಾಸವಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಯನ್ನು ತೊಲಗಿಸಿ ರಾಜ್ಯದ ಜನ 136 ಸೀಟುಗಳನ್ನು ಕಾಂಗ್ರೆಸ್‌ಗೆ ನೀಡಿದ್ದಾರೆ. ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳಬಾರದು. 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ತೊಡಬೇಕೆಂದು ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

ಹಗರಣಗಳಿಂದ ಬಿಜೆಪಿಗೆ ಭಯ

ರಾಜ್ಯದಲ್ಲಿ ಬಿಜೆಪಿ. ಅಧಿಕಾರದಲ್ಲಿದ್ದಾಗ ನೀರಾವರಿ, ಕೈಗಾರಿಕೆ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚುವರಿ ಹಣ ನೀಡಿ ರಾಜ್ಯದ ಖಜಾನೆಯನ್ನು ದಿವಾಳಿಯಾಗಿಸಿತ್ತು. ಪಿ.ಎಸ್.ಐ. ಇಂಜಿನಿಯರಿಂಗ್ ನೇಮಕ ಕೋವಿಡ್‌ನಲ್ಲಿ ನಡೆದ ಹಗರಣವನ್ನು ಎಲ್ಲಿ ಬಿಚ್ಚಿಡುತ್ತಾರೋ ಎಂಬ ಭಯದಿಂದ ಬಿಜೆಪಿ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಇಲ್ಲ ಸಲ್ಲದ ಅಪವಾದ ಹೊರಿಸುತ್ತಿದೆ. ರಾಜ್ಯಾದ್ಯಂತ ಕಾರ್ಯಕರ್ತರು ಮುಖಂಡರುಗಳು ಮುಖ್ಯಮಂತ್ರಿಯವರ ಬೆನ್ನಿಗೆ ನಿಲ್ಲಬೇಕಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ವಿರುದ್ದ ಕಾರ್ಯಕರ್ತರು ಪುಟಿದೇಳಬೇಕಿದೆ ಎಂದರು.

ತಳಮಟ್ಟದಿಂದ ಪಕ್ಷಕ್ಕೆ ದುಡಿಯಿರಿ

ಕಾರ್ಯಕರ್ತರಿಲ್ಲದೆ ಪಕ್ಷವಿಲ್ಲ. ಪಕ್ಷದ ಆಶೀರ್ವಾದಿಂದ ಸಾಮಾನ್ಯ ಕಾರ್ಯಕರ್ತೆಯಾಗಿ ಈಗ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡುತ್ತಿದ್ದೇನೆ. ನಾಲ್ಕು ವರ್ಷ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆಯಾಗಿದ್ದೇನೆ. ನನಗೆ ಎರಡು ಬಾರಿ ಪಕ್ಷ ಟಿಕೇಟ್ ನೀಡಿದಾಗ ಸೋತರೂ ಎದೆಗುಂದಲಿಲ್ಲ. 25 ವರ್ಷಗಳಿಂದ ನಾನೂ ಕೂಡ ಸಾಕಷ್ಟು ತಳಮಳ ಅನುಭವಿಸಿದ್ದೇನೆ. ಒಮ್ಮೆಲೆ ಎಲ್ಲಾ ಅಧಿಕಾರ ಸಿಗುವುದಿಲ್ಲ. ತಳಮಟ್ಟದಿಂದ ಪಕ್ಷಕ್ಕೆ ದುಡಿಯಬೇಕೆಂದು ಹೇಳಿದರು.

2028ರ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ

ಶಿಸ್ತಿನ ಪಕ್ಷ ಕಾಂಗ್ರೆಸ್‌ಗೆ ಎಷ್ಟೋ ಮಂದಿ ಜೀವ ತೇದು ತ್ಯಾಗ ಮಾಡಿದ್ದಾರೆ. ಬಲಿದಾನಗಳ ಇತಿಹಾಸವಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ.ಯನ್ನು ತೊಲಗಿಸಿ ರಾಜ್ಯದ ಜನ 136 ಸೀಟುಗಳನ್ನು ಕಾಂಗ್ರೆಸ್‌ಗೆ ನೀಡಿದ್ದಾರೆ. ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳಬಾರದು 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ತೊಡಬೇಕು. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ತಯಾರಾಗಿ ಪಕ್ಷವನ್ನು ಗೆಲ್ಲಿಸಬೇಕು. ಅಭಿವೃದ್ದಿಯೆಂದರೆ ಬರಿ ರಸ್ತೆ ನಿರ್ಮಾಣ ಮಾಡುವುದಷ್ಟೆ ಅಲ್ಲ. ಪ್ರತಿಯೊಬ್ಬರ ಮನೆ ಆರ್ಥಿಕವಾಗಿ ಸಬಲವಾಗುವುದೆ ನಿಜವಾದ ಅಭಿವೃದ್ದಿ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಮುರಳಿಧರ ಹಾಲಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ರಘು, ಕರ್ನಾಟಕ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಹನುಮಲಿ ಷಣ್ಮುಖಪ್ಪ, ಮಾಜಿ ಶಾಸಕ ಎ.ವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಎ.ಎಂ.ಇಮಾಮ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷರುದ್ರಸ್ವಾಮಿ, ರುದ್ರಾಣಿ ಗಂಗಾಧರ್ ಮೊದಲಾದ ಮುಖಂಡರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button