*ಹಿರಿಯ ನಾಯಕ, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ಸದಾ ಶೋಷಿತರ ಪರ ಯೋಚಿಸುತ್ತಿದ್ದ ಸನ್ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರ ನಿಧನದಿಂದ ತುಂಬಾ ನೋವುಂಟಾಗಿದ್ದು, ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು ಭಾಗದ ರಾಜಕಾರಣದಲ್ಲಿ ತಮ್ಮದೇ ಆದ ಕೊಡುಗೆ ಕೊಟ್ಟಿರುವ ಶ್ರೀನಿವಾಸ್ ಪ್ರಸಾದ್, ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಕೇಂದ್ರ, ರಾಜ್ಯ ಸಚಿವ ಸಂಪುಟಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, 50 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅಪರೂಪದ ರಾಜಕಾರಣಿ, ಅವರ ನಿಧನದಿಂದ ಕರ್ನಾಟಕ ಓರ್ವ ಮೌಲ್ಯಧಾರಿತ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ