Kannada NewsKarnataka NewsLatestPolitics

*ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಗುರುತಿಸಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಅಗತ್ಯ ನಿವೇಶನಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒ ಗಳಿಗೆ ಸೂಚಿಸಿದರು.

ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಇದೆ. ಸರ್ಕಾರಿ‌ ಪ್ರಾಥಮಿಕ ಶಾಲೆಗಳು, ಸರ್ಕಾರದ ಸಮುದಾಯ ಭವನಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿ ಬಳಿ ಮನವಿ ಮಾಡಿದರು.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.

ಕೃತಜ್ಞತೆ ಸಲ್ಲಿಕೆ
ಮೈಸೂರಿನಲ್ಲಿ ಆಗಸ್ಟ್ 30 ರಂದು ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯಗಳ ವಿತರಣೆ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಹಾಗೂ ಅಧಿಕಾರಿಗಳಿಗೆ ಸಚಿವರು ಈ ವೇಳೆ ಧನ್ಯವಾದ ಅರ್ಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button