
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಶೇ.21.50ರಿಂದ ಶೇ. 24.50ಕ್ಕೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಜುಲೈ 1ರಿಂದ ಜಾರಿಗೆ ಬರುಂತೆ ಸೂಚಿಸಿದೆ.
ತುಟ್ಟಿ ಭತ್ಯೆ ಹೆಚ್ಚಳದಿಂದಾಗಿ 6 ಲಕ್ಷ ರಾಜ್ಯ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.
ಇಲ್ಲಿದೆ ಡಿಎ ಹೆಚ್ಚಳ ಆದೇಶ ಮತ್ತು ಹೆಚ್ಚಳವಾಗಲಿರುವ ಸಂಬಳದ ವಿವರ –
DA CHART AS PER NEW DA- 24.50%