Latest

ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಭಾರತ ಜೋಡೋ ಪಾದಯಾತ್ರೆಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಮೈಸೂರು ಜಿಲ್ಲೆಯ ಬದನವಾಳು ಪ್ರದೇಶದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮ ಗಾಂಧೀಯವರ ಪತ್ರಿಮೆಗೆ ಗೌರವವನ್ನು ಸೂಚಿಸಿ, ಪುಷ್ಪಾರ್ಚನೆಯೊಂದಿಗೆ ಆಚರಿಸಿದರು.

ಈ ಖಾದಿ ಗ್ರಾಮೋದ್ಯೋಗಕ್ಕೆ ತನ್ನದೇ ಆದ ಇತಿಹಾಸವಿದ್ದು, 1927 ರಲ್ಲಿ ಮಹಾತ್ಮ ಗಾಂಧಿಯವರು ಈ ಕೇಂದ್ರವನ್ನು ಪ್ರಾರಂಭಿಸಿದ್ದರು. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನಾಳು ಗ್ರಾಮ ತಲುಪಿದೆ.
ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ: ಸಿಎಂ ಬೊಮ್ಮಾಯಿ

https://pragati.taskdun.com/politics/kitturu-channammaji-vijaya-jyoti-yatrecm-bsavaraj-bommaibangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button