ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ಸಚಿವರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.
ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕರಾದ ರಾಜು ಸೇಠ್, ಮಹೇಂದ್ರ ತಮ್ಮಣ್ಣವರ್, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಬಳಿ ಅವರ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು. ಇದಕ್ಕೂ ಮೊದಲು ಶಾಸಕ ರಾಜು ಕಾಗೆ ಸಹ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕತ್ತು ಹಾಗೂ ಬೆನ್ನುಹುರಿಗೆ ಪೆಟ್ಟಾಗಿದ್ದು, ಬೆಳಗಾವಿ ವಿಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಸಚಿವರನ್ನು ನೋಡಲೆಂದು ಹೆಚ್ಚಿನ ಜನರು, ರಾಜಕಾರಣಗಳು ಬರುತ್ತಿರುವುದರಿಂದ ಅವರಿಗೆ ತೊಂದರೆಯಾಗುತ್ತಿದೆ. ಚಿಕಿತ್ಸೆಗೂ ಸಮಸ್ಯೆಯಾಗುತ್ತಿದೆ ಹಾಗಾಗಿ ಆಸ್ಪತ್ರೆಗೆ 48 ಗಂಟೆ ಯಾರೂ ಬರಬೇಡಿ ಎಂದು ವೈದ್ಯ ಡಾ.ರವಿ ಪಾಟೀಲ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಂದ ಸಚಿವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ