ಕೆ ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯ ರಸ್ತೆಯನ್ನು ಎಸ್ ಸಿಪಿ ಟಿಎಸ್ ಪಿ ಯ 65 ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಭಾರತ ಹಳ್ಳಿಗಳ ದೇಶ, ನಗರಗಳು ಎಷ್ಟೇ ಬೆಳೆದರೂ ಗ್ರಾಮೀಣ ಭಾಗದಲ್ಲಿ ವಾಸಿಸುವವರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಹಳ್ಳಿಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಿದರೆ ಬಹಳಷ್ಟು ಜನರನ್ನು ತಲುಪಲು ಸಾಧ್ಯ ಎಂದರು.
ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸಿ, ಅವರ ಬದುಕನ್ನು ಹಸನುಗೊಳಿಸುವ ಕಾರ್ಯದಲ್ಲಿ ಸರಕಾರ ಮತ್ತು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿದ್ದೇನೆ, ಮುಂದೆಯೂ ಇನ್ನಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತೆನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಕಲ್ಲಪ್ಪ ರಾಮಚನ್ನವರ, ನಿಲೇಶ್ ಚಂದಗಡ್ಕರ್, ಗ್ರಾಮ ಪಂಚಾಯಯಿಯ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಬೆಳಗಾವಿ ನಗರದಲ್ಲಿ ಈದ್-ಇ-ಮಿಲಾದ್ ಹಬ್ಬದ ಪ್ರಯುಕ್ತ ಸಂಚಾರ ಮಾರ್ಗ ಬದಲಾವಣೆ
https://pragati.taskdun.com/local/route-changed-in-belagavi-city-on-sunday-eid-milad-procession/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ