

ಬಾಕಿ ಉಳಿದ ಕಾರ್ಯಕ್ರಮಗಳನ್ನು ತ್ವರಿತವಾಗಿ ಮುಗಿಸಲು ಸೂಚನೆ
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು.
2024-25 ನೇ ಸಾಲಿನ ಅನುದಾನ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್), ಸ್ತ್ರೀ ಶಕ್ತಿ ಯೋಜನೆ, ಮಹಿಳಾ ಕಲ್ಯಾಣ, ಮಕ್ಕಳ ಕಲ್ಯಾಣ, ಗೃಹ ಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ಜೊತೆಗೆ ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಐಸಿಡಿಎಸ್ ನಿರ್ದೇಶಕರಾದ ಎಂ.ಆರ್.ರವಿಕುಮಾರ್, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಹಿರಿಯ ಅಧಿಕಾರಿಗಳಾದ ಪುಷ್ಪ ರಾಯ್ಕರ್, ಮೈತ್ರಿ, ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ.ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ ಎಚ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ