Politics

*ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು.

ಘರ್ಜಿಸುವ ಹುಲಿಗಳಿಗೆ ಸಿಡಿ ತೋರಿಸಿ ಹೆದರಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅದಕ್ಕೆ ನೀವು ( ಮಾಧ್ಯಮದವರು) ಅವರಿಂದಲೇ ಉತ್ತರ ಪಡೆಯಬೇಕು. ನಾನು ಅದಕ್ಕೆ ಉತ್ತರ ನೀಡುವುದು ಸಮಂಜಸವಲ್ಲ. ಅಲ್ಲದೆ ಇಂತಹ ವಿಚಾರಗಳ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಇಲಾಖೆಯ ಉಪನಿರ್ದೇಶಕ ನಾಗರಾಜ ಸುದ್ದಿಗೋಷ್ಠಿಯಲ್ಲಿ ಇದ್ದರು.

Home add -Advt

Related Articles

Back to top button