
ಪ್ರಗತಿವಾಹಿನಿ ಸುದ್ದಿ: ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು, ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವಿಚಾರವಾಗಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಹೊಸ ಸರ್ಕಾರ ಹಾಗಾಗಿ 2-3 ದಿನಗಳಲ್ಲಿ ಗೊಂದಲಗಳು ಪರಿಹಾರವಾಗಲಿದೆ. ಅಸಮಾಧಾನಗಳು ಶಮನವಾಗಲಿವೆ ಎಂದು ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಕೂಡ ಹಿರಿಯರು. ಅನುಭವಿ ರಾಜಕಾರಣಿ. ಸಂಘಟನಾ ಚತುರರು. ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುತ್ತಾರೆ. ಗೊಂದಲಗಳನ್ನು ಬಗೆಹರಿಸುತ್ತಾರೆ. ಸುಗಮವಾಗಿ ಸರ್ಕಾರ ನಡೆಯುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.




