Kannada NewsLatestUncategorized
*60 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*



ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಿಂದ ಶ್ರೀ ಮಳೆಕರಣಿ ಮಂದಿರದವರೆಗಿನ ರಸ್ತೆಯ ಅಭಿವೃದ್ಧಿ ಹಾಗೂ ಚರಂಡಿ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಗ್ರಾಮಸ್ಥರ ಸಮ್ಮುಖದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಮಳೆಕರಣಿ ದೇವಿಯು ಬೇಡುವ ವರಗಳನ್ನು ಕರುಣಿಸುವ ಕರುಣಾಮಯಿಯಾಗಿದ್ದು, ಕ್ಷೇತ್ರದ ಪ್ರಸಿದ್ದ ಮಂದಿರಗಳಲ್ಲಿ ಒಂದಾಗಿದೆ. ಗ್ರಾಮಸ್ಥರ ಹಾಗೂ ಭಕ್ತಾಧಿಗಳ ಬೇಡಿಕೆಯಂತೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಗುಣಮಟ್ಟದ ರಸ್ತೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಬಾಳಕೃಷ್ಣ ತಿರಸೆ, ಸುನಿಲ ದೇಸಾಯಿ, ಸಂತೋಷ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು, ಗ್ರಾಮಸ್ಥರು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.
https://pragati.taskdun.com/murugesh-niranibasanagowda-patil-yatnalpanchamasali-reservationvijayapura/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ