*ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಪೂಜೆ*

ಪೇವರ್ಸ್ ಅಳವಡಿಕೆ ಅಳವಡಿಕೆಗೆ ಚಾಲನೆ ನೀಡಿದ ಸಚಿವರು
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಪ್ರಮುಖ 3 ಮುಖ್ಯ ರಸ್ತೆ ಹಾಗೂ 2 ಉಪ ರಸ್ತೆಗಳ ಡಾಂಬರೀಕರಣ ಮತ್ತು ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗಳು ನಿರ್ಮಾಣಗೊಳ್ಳಲಿದ್ದು, ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕ್ಷೇತ್ರದಲ್ಲಿ ಗುಣಮಟ್ಟದ ಕಾಮಗಾರಿಗಳಿಗೆ ಒತ್ತು ನೀಡಲಾಗುತ್ತಿದೆ. ಗ್ರಾಮೀಣ ಕ್ಷೇತ್ರದ ಜನರಿಗೆ ಉತ್ತಮ ಕೆಲಸ ಮಾಡಿಕೊಡುವುದೇ ನನ್ನ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಸ್ಥಳೀಯ ನಿವಾಸಿಗಳು, ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



