Belagavi NewsBelgaum NewsKannada NewsKarnataka NewsLatest

*45 ವರ್ಷಗಳ ಬಳಿಕ ನಡೆದ ಸವದತ್ತಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಸವದತ್ತಿ : ಸುಮಾರು 45 ವರ್ಷಗಳ ಬಳಿಕ ಅದ್ಧೂರಿಯಾಗಿ ಆಯೋಜಿಸಲಾದ ಸವದತ್ತಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.

Home add -Advt

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪುತ್ರ ಮೃಣಾಲ್ ಹೆಬ್ಬಾಳಕರ್ ಹಾಗೂ ಸೊಸೆ ಹಿತಾ ಹೆಬ್ಬಾಳಕರ್ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಗ್ರಾಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶ ಭಕ್ತರಿಂದ ಕಿಕ್ಕಿರಿದು ತುಂಬಿದ್ದು, ಭಕ್ತಿ ಹಾಗೂ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾತನಾಡಿ, “ಸವದತ್ತಿ ಪಟ್ಟಣದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಶ್ರೀ ಗ್ರಾಮದೇವಿ ಜಾತ್ರೆ ಜನರ ಭಕ್ತಿಭಾವದ ಪ್ರತೀಕವಾಗಿದೆ. ಇಂತಹ ಜಾತ್ರೆಗಳು ಸಮಾಜದಲ್ಲಿ ಏಕತೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ಹೇಳಿದರು.


ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಭಕ್ತರೊಂದಿಗೆ ಬೆರೆತು ಕೆಲಹೊತ್ತು ಸಂಭ್ರಮಿಸಿದರು.


ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆ ಜನರಲ್ಲಿ ವಿಶೇಷ ಉತ್ಸಾಹ ಮೂಡಿಸಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನ ಪಡೆದು ಹರಕೆ ತೀರಿಸಿದರು.

Related Articles

Back to top button