Kannada NewsKarnataka NewsLatest

*ಅಭಿನವ ಹಾಲಶ್ರೀ ಜೈಲಿನಿಂದ ರಿಲೀಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆ ವೇಳೆ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಹಾಗೂ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.

Home add -Advt

ವಂಚನೆ ಪ್ರಕರಣದಲ್ಲಿ ಚೈತ್ರಾ ಜೊತೆ ಅಭಿನವ ಹಾಲಶ್ರೀ ಕೂಡ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣದಲ್ಲಿ ಹಾಲಶ್ರೀಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಇಂದು ಅಭಿನವ ಹಾಲಶ್ರೀ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅಭಿನವ ಹಾಲಶ್ರೀ, ತಮ್ಮ ವಿರುದ್ಧ ಕೇಳಿಬಂದಿರುವ ಆರೋಪ ಸುಳ್ಲು. ಪ್ರತ್ಯಕ್ಷ ಕಂಡರು ಪ್ರಮಾಣಿಸಿ ನೋಡಬೇಕು ಎಂಬ ಮಾತಿದೆ. ನಮ್ಮ ಮೇಲೆ ನಂಬಿಕೆ ಇಟ್ಟ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Related Articles

Back to top button