Kannada NewsLatestPolitics

*ಪಶ್ಚಿಮ ಬಂಗಾಳ, ಆಸ್ಸಾಂನಲ್ಲಿ ಬಿಜೆಪಿ ಗೆಲುವು, ಪ್ರಧಾನಿ ಮೋದಿ, ಅಮಿತ್ ಶಾಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ದಾವಣೆಗೆರೆ ಮತ್ತು ಬಾಗಲಕೊಟೆಯಲ್ಲಿ ಹಣ ಮತ್ತು ಹೆಂಡದ ಬಲದಿಂದ ಕಾಂಗ್ರೆಸ್ ಗೆ ಜಯ ಆಗಿದೆ. ಆದರೆ, ರಾಜ್ಯದ ವಾಸ್ತವಿಕ ಸ್ಥಿತಿಯೇ ಬೇರೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಈ ಕುರಿತು ಎಕ್ಸ್ ಮಾಡಿರುವ ಅವರು, ಆಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಅಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿ, ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಅವರ ನಾಯಕತ್ವಕ್ಕೆ ಕೊಟ್ಟಿರುವ ಮನ್ನಣೆ ಮತ್ತು ಬೆಂಬಲ. ಹೀಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಆಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾಸ್ ಶರ್ಮಾ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೆಂಧು ಅಧಿಕಾರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button